Bantwala: ಕೋಮು ದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಪ್ರಕರಣ ದಾಖಲು

Share the Article

Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್‌ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಮೇ 12 ರಂದು ಆಯೋಜನೆ ಮಾಡಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕ್ಲಲಡ್ಕ ಪ್ರಭಾಕರ್‌ ಭಟ್‌ ಅವರು ಜನರನ್ನು ಉದ್ದೇಶಿಸಿ ಮಾತನಾಡುತ್ತಾ ಸಮಾಜದಲ್ಲಿ ಅಶಾಂತಿ ಮೂಡಿಸುವ ಹಾಗೂ ವಿವಿಧ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟುಮಾಡುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ಹೀಗಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರ ವಿರುದ್ಧ ಜೂನ್‌ 2 ರಂದು ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 353 (2) ಅಡಿಯಲ್ಲಿ ಪ್ರಕರಣ ಸಂಖ್ಯೆ (ಅಕ್ರ ನಂಬ್ರ) 60/2025 ರಂತೆ ಎಫ್‌ಐಆರ್‌ ದಾಖಲು ಮಾಡಲಾಗಿದೆ.

Comments are closed.