Charmadi Ghat: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪಿಕಪ್‌ ವಾಹನ ಪಲ್ಟಿ, ಚಾಲಕನಿಗೆ ಗಂಭೀರ ಗಾಯ

Share the Article

Moodigere: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್‌ ವಾಹನ ಪಲ್ಟಿಯಾದ ಘಟನೆ ನಡೆದಿದೆ.

ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಘಾಟಿಯಲ್ಲಿ ಮಂಜು ಆವರಿಸಿದ್ದು, ಈ ಕಾರಣದಿಂದ ರಸ್ತೆ ಸರಿಯಾಗ ಕಾಣದೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Comments are closed.