V Sunil Kumar: ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತನ್ನಾಡಿದವರ ಮೇಲೆ ಕ್ರಮ ಏಕಿಲ್ಲ: ವಿ ಸುನಿಲ್‌ ಕುಮಾರ್‌ ಪ್ರಶ್ನೆ

Share the Article

V Sunil Kumar: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್‌ ಕುಮಾರ್‌ ಆರೋಪ ಮಾಡಿದ್ದಾರೆ.


ಕಲ್ಲಡ್ಕ ಪ್ರಭಾಕರ್‌ ಭಟ್‌ ಸೇರಿ ಹಿಂದೂ ಸಂಘಟನೆಗಳ 15 ಮಂದಿ ವಿರುದ್ಧ ಮಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತಗಳನ್ನಾಡಿದವರ ಮೇಲೆ ಏಕೆ ಕ್ರಮವಿಲ್ಲ? ಕೇವಲ ಹಿಂದೂಗಳ ವಿರುದ್ಧ ಮಾತ್ರ ಏಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಸರಕಾರದ ಏಕಪಕ್ಷೀಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ. ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತ ಮಾಡುತ್ತಿದೆ. ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ, ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ತಲವಾರು ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ ಎಂದು ಸುನಿಲ್‌ ಕುಮಾರ್‌ ಪ್ರಶ್ನೆ ಮಾಡಿದ್ದಾರೆ.

Comments are closed.