Harangi Dam: ಹಾರಂಗಿ ಪುನರ್ವಸತಿ ವಿಭಾಗದಿಂದ ಪ್ರಕಟಣೆ – ಪ್ರವಾಹ ಮುನ್ನೆಚ್ಚರಿಕೆ ಸೂಚನೆ

Harangi Dam: ಹಾರಂಗಿ ಜಲಾಶಯ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತಿದೆ. ಇದರಿಂದ ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಜಲಾಶಯದಲ್ಲಿ ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸುವ ಸಾಧ್ಯತೆಯಿದೆ. ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷತ ಸ್ಥಳಗಳಿಗೆ ತೆರಳಲು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ..
Comments are closed.