IPL Trophy: ಆರ್‌ಸಿಬಿಗೆ ಐಪಿಎಲ್‌ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಅವಘಡ: ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

Share the Article

IPL Trophy: ಆರ್‌ಸಿಬಿ ತಂಡ ಐಪಿಎಲ್‌ ಟ್ರೋಫಿ ಎತ್ತಿಹಿಡಿದ ಬೆನ್ನಲ್ಲೇ ಸಂಭ್ರಮ ಮುಗಿಲು ಮುಟ್ಟಿದ ಸಂದರ್ಭದಲ್ಲೇ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್‌ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.

ಸಂಭ್ರಮಾಚರಣೆ ಮಾಡುತ್ತಿದ್ದ ದುಷ್ಕರ್ಮಿಗಳು ಬಾರ್‌ಗೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ. ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments are closed.