Uppinangady: ಉಪ್ಪಿನಂಗಡಿ: ದಾರಿ ಕೇಳುವ ನೆಪದಲ್ಲಿ ಚಿನ್ನದ ಸರ ಕಳವು!

Uppinangady: ಬೈಕ್ ನಲ್ಲಿ ಬಂದ ಸವಾರರಿಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ದಾರಿ ಕೇಳುವ ನೆಪದಲ್ಲಿ ತಡೆದು, ಕುತ್ತಿಗೆಯಲ್ಲಿ ಇದ್ದ ಚಿನ್ನದ ಸರವನ್ನು ಎರಗಿಸಿ ಪರಾರಿಯಾದ ಘಟನೆ ನಿನ್ನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟುವಿನಲ್ಲಿ ನಡೆದಿದೆ.

ಪಡುಬೆಟ್ಟುವಿನ ಅಲೀಮಮ್ಮ (65) ಎಂಬವರ 10 ಪವನ್ ಚಿನ್ನವನ್ನು ಕಳ್ಳರು ಎಗರಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ (Uppinangady) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಎಚ್. ಗೌಡ, ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments are closed.