Karnataka: ಧಾರ್ಮಿಕ ದತ್ತಿ ಇಲಾಖೆಯಿಂದ 6 ದಿನಗಳ ಪ್ರವಾಸ ಯಾತ್ರೆ! ಈ ರೀತಿ ಬುಕ್ ಮಾಡಿ

Karnataka: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ (Karnataka) ಭಾರತ ಗೌರವ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ.

ಈ ಪ್ಯಾಕೇಜ್ಗೆ ಒಟ್ಟು ₹15,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹5,000 ಭರಿಸಲಾಗುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ.
3 ಟೈರ್ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಪ್ರತಿ ಕೋಚ್ಗೆ ಪ್ರವಾಸ ಮಾರ್ಗದರ್ಶಕರು, ರೈಲಿನಲ್ಲಿ ಭದ್ರತಾ ವ್ಯವಸ್ಥೆ ಇರುತ್ತದೆ.
ಟಿಕೆಟ್ ಬುಕ್ಕಿಂಗ್ಗಾಗಿ https://www.irctctourism.com/ ವೆಬ್ಸೈಟ್ಗೆ ಭೇಟಿ ನೀಡಬಹುದು. ಅಥವಾ 9363488229 ಗೆ ಕರೆ ಮಾಡಬಹುದು.
Comments are closed.