Bengaluru:ಸಿದ್ದರಾಮಯ್ಯ ಒಬ್ಬ ಹೇಡಿ, ವೀಕ್, ಅಸಹಾಯಕ, ಮುಖ್ಯಮಂತ್ರಿ – ನಿವೃತ್ತ ಪೊಲೀಸ್ ಆಧಿಕಾರಿ ಭಾಸ್ಕರ್ ರಾವ್

Bengaluru: ಸಿದ್ದರಾಮಯ್ಯ ಒಬ್ಬ ಹೇಡಿ, ವೀಕ್ ಅಸಹಾಯಕ ಮುಖ್ಯಮಂತ್ರಿ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಬಹಳ ಸ್ಟ್ರಾಂಗ್ ಇದ್ರು.

ಈಗ ಸಂಪೂರ್ಣವಾಗಿ ಕಳೆದು ಹೋಗಿದ್ದಾರೆ ಎಂದು ಮೈಸೂರಿನಲ್ಲಿ ನಿವೃತ್ತ ಪೊಲೀಸ್ ಆಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ.
ಇಡೀ ಪ್ರಕರಣದಲ್ಲಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಮತ್ತು ಪರಮೇಶ್ವರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಿದೆ.
ತಪ್ಪು ಮಾಡಿರುವವರೇ ಇವರು.
ಕೇಂದ್ರ ಸರ್ಕಾರ ಕೊಟ್ಟ ಕಾನೂನನ್ನ ದುರುಪಯೋಗ ಪಡಿಸಿಕೊಂಡು ಐಪಿಎಸ್ ಅಧಿಕಾರಿಗಳ ಅಮಾನತು ಮಾಡಿದ್ದಾರೆ.
ಇದು ದಯಾನಂದಗೆ ಸೀಮಿತವಾದ ವಿಚಾರವಲ್ಲ.
ಇಡೀ ಪೊಲೀಸ್ ಇಲಾಖೆಗೆ ಮಾಡಿದ ಕಗ್ಗೊಲೆ.
ಪೊಲೀಸರ ನೈತಿಕ ಸ್ಥೈರ್ಯವನ್ನೇ ಸಿದ್ದರಾಮಯ್ಯ ಕುಗ್ಗಿಸಿದ್ದಾರೆ.
ಹೀಗೆ ಎಷ್ಟು ಜನರ ಮೇಲೆ ಕ್ರಮ ತೆಗೆದುಕೊಳ್ಳುತ್ತಾ ಹೋಗುತ್ತೀರಾ. ತೀರಾ ಅವಮಾನಕರ ರೀತಿಯಲ್ಲಿ ದಯಾನಂದ ಅವರನ್ನ ನಡೆಸಿಕೊಂಡಿದ್ದೀರಾ. ಅವರ ಮೇಲೆ ನಿಮಗೆ ಕೋಪ ಬಂದಿದ್ದರೆ ವರ್ಗಾವಣೆ ಮಾಡಬಹುದಿತ್ತು, ಕಡ್ಡಾಯ ರಜೆ ಮೇಲೆ ಕಳುಹಿಸಬಹುದಿತ್ತು.
ಅದನ್ನ ಬಿಟ್ಟು ಅಮಾನತು ಮಾಡಿದ್ದು ಸರಿಯಲ್ಲ.
ಐಪಿಎಲ್ ಏನು ರಾಜ್ಯ ಮತ್ತು ದೇಶದ ಪಂದ್ಯಾವಳಿನ. ಅದೊಂದು ಕ್ಲಬ್ ಪಂದ್ಯಾ ಅಷ್ಟೇ. ಅದಕ್ಕೆ ಡಿ.ಕೆ ಶಿವಕುಮಾರ್ ಹೋಗಿದ್ದೇನು?, ಮುತ್ತಿಕಿದ್ದೇನು?, ಭಾವುಟ ಹಿಡಿದಿದ್ದೇನು.
ಇದೆಲ್ಲಾ ಮುಖ್ಯಮಂತ್ರಿಗೆ ಗೊತ್ತಾಗಲಿಲ್ವಾ.
ಕಾಂಗ್ರೆಸ್ ಹೈ ಕಮಾಂಡ್ ಬಿಗಿಯಾಗಿದ್ರೆ ಈ ಸಿಎಂ ಡಿಸಿಎಂ ಗೃಹ ಸಚಿವರನ್ನ ಅಧಿಕಾರದಿಂದ ಕೆಳಗಿಳಿಸಬೇಕು.
ಯಾವುದೊ ಆಫ್ರಿಕಾ ದೇಶದಲ್ಲಿ ಹೆಣಗಳನ್ನ ಹೊತ್ತುಕೊಂಡ ಹೋದ ರೀತಿಯಲ್ಲಿ ಬೆಂಗಳೂರಿನಲ್ಲಿ ಹೊತ್ತಿಕೊಂಡು ಹೋಗಲಾಗಿದೆ ಎಂದು ಭಾಸ್ಕರ್ ರಾವ್ ಬೇಸರ ವ್ಯಕ್ತಪಡಿಸಿದ್ದಾರೆ
Comments are closed.