Chikkaballapura: ಜೂ.16 ರಿಂದ 20ರ ವರೆಗೆ ‘ನಂದಿ ಹಿಲ್ಸ್’ ಗೆ ಪ್ರವಾಸಿಗರ ಪ್ರವೇಶ ನಿರ್ಬಂಧ!

Chikkaballapura: ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸರ್ಕಾರದ ಸಚಿವ ಸಂಪುಟದ 2025ನೇ ಸಾಲಿನ 13ನೇ ಸಭೆಯನ್ನು ಚಿಕ್ಕಬಳ್ಳಾಪುರ ಹಮ್ಮಿಕೊಂಡಿರುವುದರ ಹಿನ್ನಲೆಯಲ್ಲಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ ಹಾಗೂ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳನ್ನು ಮುಂಗಡ ಕಾಯ್ದಿರಿಸುವಿಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದ್ದಾರೆ.
Comments are closed.