Home News Women empowerment: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ:

Women empowerment: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ:

Hindu neighbor gifts plot of land

Hindu neighbour gifts land to Muslim journalist

Women empowerment: ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅಡಿಯಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜೂನ್ 30, 2025 ಕೊನೆಯ ದಿನಾಂಕವಾಗಿದೆ.

ಯಂತ್ರಗಳನ್ನು ಪಡೆಯಲು ಈ ಅರ್ಹತೆಗಳನ್ನು ಹೊಂದಿರಬೇಕು:

•ಈ ಮಹಿಳೆಯರು ಹಿಂದುಳಿದ ವರ್ಗಗಳ ಪ್ರವರ್ಗ 1 2ಎ 3ಎ ಹಾಗೂ 3ಬಿಗೆ ಸೇರಿದವರಾಗಿರಬೇಕು.

•ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

•ಅಭ್ಯರ್ಥಿಗಳ ವಯೋಮಿಮಿ 18 ರಿಂದ 55 ವರ್ಷಗಳ ಒಳಗೆ ಇರಬೇಕು.

•ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

•ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

•2023-24ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹಾಗೂ ಆಸಕ್ತರು ಗ್ರಾಮ ಒ ನ್ ಹಾಗೂ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬಯಸುವವರಿಗೆ ಈ ದಾಖಲೆಗಳು ಕಡ್ಡಾಯವಾಗಿರುತ್ತದೆ:

•ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

•ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೂಂದಾಣಿಕೆಯಾಗಬೇಕು.