ಕರಾವಳಿಯಲ್ಲಿ ಮಳೆ ಆರ್ಭಟ: ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

ಕಾರವಾರ: ಕರಾವಳಿ ಕಾರವಾರದ ಭಾಗದಲ್ಲಿ ಮಳೆ (Rain) ಮುಂದುವರಿದ ಕಾರಣ ಉತ್ತರಕನ್ನಡದಲ್ಲಿ ಇಂದು, ಜೂ.12 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರದ ಆಸ್ನೋಟಿ ಎಂಬಲ್ಲಿ 137.5 ಎಂಎಂ ಮಳೆ ದಾಖಲಾಗಿದೆ. ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಾರವಾರದಲ್ಲಿ ಭಾರೀ ಮಳೆಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ಥಗೊಂಡಿದೆ.
Comments are closed.