Home News CM Siddaramiah : ಈ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ – ಬಿಗ್ ಅಪ್ಡೇಟ್...

CM Siddaramiah : ಈ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ – ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

Hindu neighbor gifts plot of land

Hindu neighbour gifts land to Muslim journalist

CM Siddaramiah : ರಾಜ್ಯದಲ್ಲಿ ಕೆಲವು ಜಿಲ್ಲೆಗಳನ್ನು ಒಡೆದು ಭಾಗ ಮಾಡಿ ಹೊಸ ಜಿಲ್ಲೆಗಳನ್ನು ರಚಿಸಬೇಕು ಎಂದು ಅಲ್ಲಿನ ಸ್ಥಳಿಯರು ಆಗ್ರಹಿಸುತ್ತದೆ ಬರುತ್ತಿದ್ದಾರೆ. ಇದೀಗ ಹೊಸ ಜಿಲ್ಲೆ ರಚನೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಬಿಗ್ ಅಪ್ಡೇಟ್ ನೀಡಿದ್ದಾರೆ.

ಹೌದು, ರಾಜ್ಯದಲ್ಲಿ ಬೆಳಗಾವಿಯನ್ನು ವಿಭಜಿಸಿ ಬೈಲಹೊಂಗಲ ಅಥವಾ ಗೋಕಾಕ್‌, ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ಬೇಡಿಕೆಯಿದೆ. ಜೊತೆಗೆ ತುಮಕೂರಿನ ಮಧುಗಿರಿ, ತಿಪಟೂರು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಜಿಲ್ಲೆಗಳಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ, ಮೈಸೂರಿನ ಹುಣಸೂರು ಜಿಲ್ಲೆಗಳಾಗಬೇಕು ಎಂಬುದು ಅಲ್ಲಿನ ಜನರ ಆಗ್ರಹಿಸಿದ್ದಾರೆ.

ಇದೀಗ ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ