Accident: ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಕಾರು: ಮಹಿಳಾ ಸಿಬ್ಬಂದಿ ಮೃತ್ಯು, ಇಬ್ಬರು ಗಂಭೀರ!!

Accident: ವೇಗವಾಗಿ ಬಂದ ಎಸ್ ಯುವಿಕಾರೊಂದು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಪರಿಣಾಮ ಓರ್ವ ಮಹಿಳಾ ಕಾನ್ ಸ್ಟೇಬಲ್ ಮೃತಪಟ್ಟು ಇಬ್ಬರು ಇನ್ಸ್‌ಪೆಕ್ಟರ್‌ಗಳು ಗಂಭೀರ ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್ ನಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

12:30 ರ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಅಟಲ್ ಪಥ್ ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಹರಿದಿದೆ ಈ ವೇಳೆ ಮೂವರು ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳಾ ಕಾನ್ ಸ್ಟೇಬಲ್ ಕೋಮಲ್ ಕುಮಾರಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತ ವೇಳೆ ಕಾರಿನೊಳಗೆ ಇದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಅಲ್ಲದೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Comments are closed.