Ahmedabad Plane Crash: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತ: ಸಹಪೈಲೆಟ್ ಮಂಗಳೂರಿನ ಕುಂದರ್ ವಿಧಿವಶ!

Ahmedabad Plane Crash: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ವಿಮಾನದ ಸಹ ಪೈಲೆಟ್ ಕ್ಲೈವ್ ಕುಂದರ್ ಮಂಗಳೂರು ಮೂಲದವರು. ಅವರು ಘಟನೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಮಾನ ಮೆಡಿಕಲ್ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ ಪತನ ಗೊಂಡಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.
ಘಟನೆಯಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ.
ಫೆಡರಲ್ ವಾಯುಯಾನ ನಿಯಮಗಳ ಪ್ರಕಾರ ಪ್ರಯಾಣಿಕ ಮತ್ತು ಸರಕು ವಿಮಾನಗಳ ಹಾರಾಟಕ್ಕೆ ಕನಿಷ್ಠ ಇಬ್ಬರು ಪೈಲಟ್ಗಳು ಇರಬೇಕು. ಕ್ಲೈವ್ ಕುಂದರ್ ಮುಂಬೈನಲ್ಲಿ ನೆಲೆಸಿದ್ದು ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ ತರಬೇತಿ ಪಡೆದಿದ್ದರು. ಒಟ್ಟು 1,100 ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದರು. ಕ್ಲೈವ್ ಕುಂದರ್ ಅವರು 8,200 ಗಂಟೆಗಳಿಗಿಂತ ಹೆಚ್ಚು ಹಾರಾಟದ ಅನುಭವ ಹೊಂದಿರುವ ಅನುಭವಿ ಪೈಲಟ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರಿಗೆ ಸಹಾಯ ಮಾಡುತ್ತಿದ್ದರು.
Comments are closed.