Chikkamagaluru: ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಸಂಪೂರ್ಣ ಬಂದ್

Chikkamagaluru: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ನೆಮ್ಮಾರು ಬಳಿ ರಾಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ, ವಾಹನ ಸಂಚಾರ ಸ್ಥಗಿತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ನೆಮ್ಮಾರುವಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆ ಕೂಡಾ ಗುಡ್ಡ ಕುಸಿದ ಘಟನೆ ನಡೆದಿತ್ತು. ಇದೀಗ ಅದೇ ಕುಸಿದ ಜಾಗದಲ್ಲಿಯೇ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಶೃಂಗೇರಿ-ಮಂಗಳೂರು ಮಾರ್ಗದಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಮಣ್ಣು ತೆರವು ಮಾಡಲು ಭಾರೀ ಮಳೆ ಅಡ್ಡಿಯಾಗಿದ್ದು, ಕೆಲಸ ವಿಳಂಬಗೊಳ್ಳುತ್ತಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Comments are closed.