Suntikoppa: ಸುಂಟಿಕೊಪ್ಪ ಪೊಲೀಸರ ಕಾರ್ಯಾಚರಣೆ ಅಕ್ರಮ ಗಾಂಜಾ ಮಾರಾಟ : ಇಬ್ಬರು ಆರೋಪಿಗಳು ಅಂದರ್

Share the Article

Suntikoppa: ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಡಗರಹಳ್ಳಿಯ ಆಟೋ ಚಾಲಕ ಜಗದೀಶ್ ಅಲಿಯಾಸ್ ಜಗ್ಗ ಮತ್ತು ಗದ್ದೆಹಳ್ಳ ನಿವಾಸಿ ನೌಫಲ್ ಎಂಬಿಬ್ಬರು ಬಂಧನಕ್ಕೊಳಗಾಗಿರುವ ಆರೋಪಿ ಗಳಾಗಿದ್ದು ಇವರಿಂದ 80 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ನೆನ್ನೆ ರಾತ್ರಿ ಸುಂಟಿಕೊಪ್ಪ ಪಟ್ಟಣದಲ್ಲಿ ಆರೋಪಿಗಳಿಬ್ಬರು ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಡಿಎಸ್ಪಿ ಚಂದ್ರಶೇಖರ್ ಹಾಗೂ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಮೋಹನ್ ರಾಜ್, ಕ್ರೈಮ್ ಸಬ್ ಇನ್ಸ್ ಪೆಕ್ಟರ್ ಭಾರತಿ ಮತ್ತು ಸಿಬ್ಬಂದಿಗಳು ದಾಳಿ ಮಾಡಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Comments are closed.