lalu Prasad: ಕಾಲಿನ ಬಳಿ ಅಂಬೇಡ್ಕರ್ ಫೋಟೋ ಇಟ್ಟು ಫೋಟೋ ತೆಗೆಸಿಕೊಂಡ ಮಾಜಿ ಸಿಎಂ ಲಾಲು!!

Share the Article

Lalu Prasad: ಬಿಹಾರದ ಮಾಜಿ ಸಿಎಂ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು ಶನಿವಾರ ತಮ್ಮ ನಿವಾಸದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಅಪಮಾನ ಎಸೆಗಿದ್ದಾರೆಂದು ಆರೋಪಿಸಲಾಗಿದೆ.

ಹೌದು, ಶನಿವಾರ ಲಾಲು ಪ್ರಸಾದ್ ಯಾದವ್ ಅವರ ಜನ್ಮದಿನ ನಿಮಿತ್ತ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಒಂದು ಕುರ್ಚಿಯ ಮೇಲೆ ಕಾಲಿಟ್ಟುಕೊಂಡು ಮತ್ತೊಂದು ಕುರ್ಚಿಯ ಮೇಲೆ ಕುಳಿತಿದ್ದರು. ಈ ವೇಳೆ ಅವರ ಕಾಲಿನ ಬಳಿ ನಾಯಕನೊಬ್ಬ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಫೋಟೋ ಇರಿಸಿ ಜೊತೆಗೆ ತಾನೂ ನಿಂತು ಚಿತ್ರ ತೆಗೆಸಿಕೊಂಡಿದ್ದಾನೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇನ್ನು ದುರಂಹಕಾರದಿಂದ ವರ್ತಿಸಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಲಾಲು ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಬಿಜೆಪಿ ವತಿಯಿಂದ ದೂರು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Comments are closed.