Ramalinga Reddy: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಟೆಕ್ಕಿ ಮಹಿಳೆ ಹಲ್ಲೆ ಪ್ರಕರಣ: ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Share the Article

Ramalinga Reddy: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆಯೊಬ್ಬರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್‌ ಹಾಗೂ ಪೊಲೀಸ್‌ ಕಮಿಷನರ್‌ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪತ್ರ ಬರೆದಿದ್ದಾರೆ.

ಬೆಳ್ಳಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ, ಮಹಿಳಾ ಟೆಕ್ಕಿಯೊಬ್ಬರು ತಾವು ಕೋರಿದ ಕಡೆ ಬಸ್‌ ನಿಲ್ಲಿಸಲಿಲ್ಲ ಎನ್ನುವ ಕಾರಣಕ್ಕೆ ಚಾಲಕ ಹುಸೇನ್‌ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಕುರಿತು ಬೆಳ್ಳಂದೂರು ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Comments are closed.