ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆ: ನಾಲ್ಕು ತಾಲೂಕಿನ ಶಾಲಾ – ವಿದ್ಯಾ ಸಂಸ್ಥೆಗಳಿಗೆ ನಾಳೆ ರಜೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಕಟಣೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
5. ಜಿಲ್ಲಾಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ Incident Commander ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 d໐໖ dao-1077/0824 2442590
Comments are closed.