Belthangady: ಆರ್ಲಪದವಿನಲ್ಲಿ ಗೋವುಗಳ ಸಾಗಾಟ: ಹಿಂದೂ ಸಂಘಟನೆ ಕಾರ್ಯಕರ್ತರಿಂದ ಠಾಣೆಗೆ ದೂರು?!

Belthangady: ಬೆಳ್ತಂಗಡಿ (Belthangady) ತಾಲೂಕಿನ ಆರ್ಲಪದವು ಎಂಬಲ್ಲಿ ಲಾರಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದು, ಇದು ಅಕ್ರಮ ಸಾಗಾಟವೆಂಬ ಶಂಕೆಯ ಮೇರೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ ಸಂಪ್ಯ ಠಾಣಾ ಪೊಲೀಸರು, ಸಾಗಾಟಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಮರ್ಪಕವಾಗಿದ್ದರಿಂದ ಯಾವುದೇ ಪ್ರಕರಣ ದಾಖಲಿಸದೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಕೇರಳದ ಪೆರ್ಲ ಸಮೀಪದ ಬಜಕೂಡ್ಲು ಗೋಶಾಲೆಯಿಂದ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ನಾಗಮಂಗಲದಲ್ಲಿರುವ ಶ್ರೀಲಕ್ಷ್ಮೀ ಗೋಶಾಲೆಗೆ ಸಾಗಿಸಲಾಗುತ್ತಿತ್ತು. ಈ ಗೋವುಗಳನ್ನು ಪಾಣಾಜೆ ಗ್ರಾಮದ ಆರ್ಲಪದವಿನಲ್ಲಿ ಲಾರಿಗೆ ತುಂಬಿಸುತ್ತಿದ್ದ ವೇಳೆ, ಸ್ಥಳೀಯರಲ್ಲಿ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಂಪ್ಯ ಠಾಣಾ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.
Comments are closed.