Gadaga: ಪ್ರೇಯಸಿಯನ್ನು ಕೊಂದು ಜಮೀನಿನಲ್ಲಿ ಹೂತು ಹಾಕಿದ ಪ್ರಿಯತಮ- 6 ತಿಂಗಳ ಬಳಿಕ ಸಿಕ್ಕಿಬಿದ್ದ!!

Gadaga : ಗದಗ ಯುವತಿ ನಾಪತ್ತೆ ಕೇಸ್ ಬಗ್ಗೆ ಬಿಗ್ ಅಪ್ಡೇಟ್ ದೊರೆತಿದ್ದು, ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ.

ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇಬ್ಬರ ಕುಟುಂಬಗಳು ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ. ಯುವತಿ ಮಧು ಕುಟುಂಬಸ್ಥರು ಆಕೆಯನ್ನು ಚಿಕ್ಕಪ್ಪನ ಮನೆಗೆ ಕಳುಹಿಸಿದ್ದರು. ಸತೀಶ್ ಬೈಕ್ ನಲ್ಲಿ ಅಲ್ಲಿಗೆ ಹೋಗಿ ಮಧುಳನ್ನು ಭೇಟಿ ಮಾಡಿದ್ದು, ಅಲ್ಲಿಂದ ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ.
ಅಂದಹಾಗೇ 2024 ಡಿಸೆಂಬರ್ 16 ರಂದು ಪ್ರೇಯಸಿ ಮಧುಶ್ರೀಯನ್ನು ಕರೆದುಕೊಂಡು ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಹೊರವಲಯದ, ತಮ್ಮ ಜಮೀನಿಗೆ ಹೋಗಿದ್ದ. ಆಗ ಮಧುಶ್ರೀ ಮದುವೆಯಾಗು ಎಂದು ಹಠ ಹಿಡಿದಿದ್ದಾಳೆ. ಇದರಿಂದ ಇಬ್ಬರ ನಡುವೆ ಜಗಳವಾಗಿದ್ದು, ಗಲಾಟೆ ವಿಕೋಪಕ್ಕೆ ಹೋಗಿದೆ. ರೊಚ್ಚಿಗೆದ್ದ ಸತೀಶ್ ಮಧುಶ್ರೀಯ ವೇಲ್ ನಿಂದ ಕುತ್ತಿಗೆಗೆ ಬಿಗಿದು, ಕೊಲೆ ಮಾಡಿದ್ದಾನೆ. ನಂತರ ಪಕ್ಕದ ಹಳ್ಳದಲ್ಲಿ ಅವಳ ಶವವನ್ನು ಹೊತು ಹಾಕಿ, ಏನೂ ಗೊತ್ತಿಲ್ಲದ ರೀತಿ ಇದ್ದ.
ಈ ನಡುವೆ 2025ರ ಜ.12ರಂದು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಗೆ ಗದಗ ಪುಟ್ಟರಾಜನಗರದ ನಿವಾಸಿ ಬಸವರಾಜ ಅಂಗಡಿ ತಮ್ಮ ತಂಗಿ ಮಧುಶ್ರೀ ನಾಪತ್ತೆ ಆಗಿದ್ದಾಳೆ ಎಂದು ದೂರು ನೀಡಿದ್ದರು. ಬಳಿಕ ಪೊಲೀಸರು ಸತೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ, ಆತ ಮಧುಳನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾನ. ಈ ನಡುವೆ ಪ್ರತ್ಯದರ್ಶಿಯೊಬ್ಬರು ಡಿಸೆಂಬರ್ 16 ರಂದು ಇಬ್ಬರನ್ನು ಒಟ್ಟಿಗೆ ನೋಡಿದ್ದಾಗಿ ಹೇಳಿದ್ದಾರೆ. ಬಳಿಕ ಸತೀಶನ ಮೇಲೆ ಸಂಶಯಗೊಂಡ ಪೊಲೀಸರು, ಆತನ ಮೊಬೈಲ್ ಲೊಕೇಶನ್ ಮತ್ತು ಆತನ ಮೇಲೆ ನಿಗಾ ಇಟ್ಟಾರೆ.
ಮತ್ತೊಂಡೆದೆ ಆತ ನೀಡಿದ ಹೇಳಿಕೆಗೂ ಘಟನೆ ನಡೆದ ದಿನ ಆತ ಇದ್ದ ಸ್ಥಳದ ಮೊಬೈಲ್ ಲೊಕೇಶನ್‌ಗೂ ತಾಳೆಯಾಗದಿರುವುದು ಸಂಶಯ ಹೆಚ್ಚಾಗುವಂತೆ ಮಾಡಿದೆ. ಬಳಿಕ ಆತನನ್ನು ಮತ್ತಷ್ಟು ತೀವ್ರವಾಗಿ ವಿಚಾರಣೆ ನಡೆಸಿದಾಗ ನಿಜ ಸಂಗತಿ ಬಾಯಿ ಬಿಟ್ಟಿದ್ದಾನೆ.
Comments are closed.