Agriculture Diploma: ಕೃಷಿಯಲ್ಲಿ ಆಸಕ್ತಿ ಇದೆಯಾ? ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Share the Article

Agriculture diploma: ಪ್ರಸಕ್ತ (2025-26) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಡಿಪ್ಲೊಮಾ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್, 27 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದಾಗಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ.40 ಪ.ಜಾ. ಮತ್ತು ಪ.ಪಂ./ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೊಮಾ ಕೋರ್ಸ್‍ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇμÉ್ಮ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಕಾಲೇಜು ಮತ್ತು ವಿಳಾಸ: ಪ್ರಾಂಶುಪಾಲರು, ಡಿಪೆÇ್ಲಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ- 576213, ಉಡುಪಿ ಜಿಲ್ಲೆ. ದೂ.ಸಂ.9108241342, 9686405090, 9901355032 ಇ-ಮೇಲ್ princi-brahmavar@uahs.edu.in Website: www.uahs.edu.in ನ್ನು ಸಂಪರ್ಕಿಸಬಹುದು.

Comments are closed.