Covid -19: ರಾಜ್ಯದಲ್ಲಿ ಮತ್ತೆ 208 ಹೊಸ ಕೋವಿಡ್ ಪ್ರಕರಣ

Share the Article

Covid 19- ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೆ ಹೊಸ 208 ಪ್ರಕರಣಗಳು ವರದಿಯಾಗಿವೆ.

 

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 208 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಹಾಗೂ ಸೋಂಕಿಗೆ ಒಳಗಾದ 103 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

 

ಈ ಪೈಕಿ 692 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 4 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Comments are closed.