Kadaba: ಕಡಬ: ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ: ಆರೋಪಿ ಪರಾರಿ!

Kadaba: ಕಡಬ (Kadaba) ತಾಲೂಕಿನ ಸವಣೂರು ಗ್ರಾಮದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಸಾಗಾಟ ಜಾಲದ ಮೇಲೆ ಬೆಳ್ಳಾರೆ ಪೊಲೀಸರು ಕಾರ್ಯಾಚರಣೆ ನಡೆಸುವ ವೇಳೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಕಾರ್ಯಾಚರಣೆ ವೇಳೆ, ಸುಮಾರು 16 ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಲಾರಿಗಳು, ಕಲ್ಲು ಕತ್ತರಿಸುವ ಯಂತ್ರ ಹಾಗೂ ಅಪಾರ ಪ್ರಮಾಣದ ಕೆಂಪುಕಲ್ಲನ್ನು ವಶಪಡಿಸಿಕೊಳ್ಳಲಾಗಿದೆ.
Comments are closed.