Karnataka Band : ರಾಜ್ಯದಲ್ಲಿ ಥಗ್ ಲೈಫ್ ರಿಲೀಸ್‌ – ಕರ್ನಾಟಕ ಬಂದ್‌ ಸಾಧ್ಯತೆ, ನಾಳೆ ಶಾಲಾ-ಕಾಲೇಜುಗಳಿಗೆ ರಜೆ?

Share the Article

Karnataka Band : ಕನ್ನಡದ ಹುಟ್ಟಿನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಿರಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿದ್ದವು. ಆದರೆ ಈಗ ಸುಪ್ರೀಂ ಕೋರ್ಟ್ ಕರ್ನಾಟಕದಲ್ಲಿ ಈ ಚಿತ್ರ ರಿಲೀಸ್ ಗೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಕನ್ನಡ ಚಿತ್ರಮಂದಿರಗಳಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಬೆನ್ನಲ್ಲೇ ಕರ್ನಾಟಕ ಬಂದ್ ಆಗುತ್ತಾ ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.

ಹೌದು, ಸುಪ್ರೀಂ ಕೋರ್ಟ್ ಥಗ್‌ ಲೈಫ್‌ ಸಿನಿಮಾ ಬಿಡುಗಡೆಗೆ ಒಪ್ಪಿಗೆ ನೀಡಿದ್ದು, ಸಿನಿಮಾ ರಾಜ್ಯದಲ್ಲಿ ಬಿಡುಗಡೆಯಾದರೆ ಕರ್ನಾಟಕ ಬಂದ್‌ ಮಾಡುವುದಾಗಿ ಈ ಮೊದಲೇ ಕನ್ನಡಪರ ಹೋರಾಟಗರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದರು. ಆದರೆ ನಂತರದಲ್ಲಿ ಸಿನಿಮಾ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ ಮತ್ತೆ ಸಿನಿಮಾ ಬಿಡುಗಡೆಯಾಗಲಿದ್ದು, ಏನಾದರೂ ಕರ್ನಾಟಕ ಬಂದ್‌ ಆಗಬಹುದೇ ಎಂಬ ಮಾತುಗಳು ಕೇಳಿಬರುತ್ತಿದೆ.

ಇನ್ನು ಏನಾದರೂ ಕರ್ನಾಟಕ ಬಂದ್‌ ಆದರೆ ಶಾಲಾ- ಕಾಲೇಜುಗಳಿಗೆ ರಜೆ ಸಿಗುತ್ತದೆಯೇ ಎಂಬ ಅನುಮಾನ ಅನೇಕರಲ್ಲಿ ಮೂಡಿದೆ. ಆದರೆ ಸುಪ್ರೀಂ ಕೋರ್ಟಿನ ತೀರ್ಪಿನ ಬಳಿಕ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ಕನ್ನಡಪರ ಸಂಘಟನೆಗಳು ನೀಡಿಲ್ಲ. ಮುಂದೆ ಏನಾದರೂ ಪ್ರತಿಕ್ರಿಯೆ ಬರಬಹುದು ಎಂದು ಕಾದು ನೋಡಬಹುದು. ಒಂದು ವೇಳೆ ಮತ್ತೆ ಕನ್ನಡಪರ ಸಂಘಟನೆಗಳು ಬಂದ್ ಕೂಗು ಎತ್ತಿದರೆ ಕರ್ನಾಟಕ ಬಂದ್ ಆದರೆ ಶಾಲೆ ಕಾಲೇಜುಗಳಿಗೆ ರಜೆ ಇರುವ ಸಾಧ್ಯತೆ ಇದೆ. ಜೊತೆಗೆ ಈ ವಿವೇಚನೆಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಬಿಟ್ಟಿರಲಾಗಿದೆ.

Comments are closed.