Home News Karnataka: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

Karnataka: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

SBIF Asha scholarship

Hindu neighbor gifts plot of land

Hindu neighbour gifts land to Muslim journalist

Karnataka: ಪ್ರಸಕ್ತ (2025-26) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssp.postmatric.karnataka.gov.in) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

 

ವಿದ್ಯಾರ್ಥಿ ಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ) ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು, ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ) , ಹಿಂದಿನ ವರ್ಷದ ಮಾಕ್ರ್ಸ್‍ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ (sstudy/bonofide certificate) ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ) ಶುಲ್ಕ ರಶೀದಿ (Free Receipt)(ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ತಂದೆ/ತಾಯಿ/ಪೋಷಕರ ಆಧಾರ್ ಪ್ರತಿ ಈ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು.

 

 

ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿ.ಇ.ಟಿ. ಮೂಲಕ ಎಂ.ಬಿ.ಬಿ.ಎಸ್. ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಬಿ.ಆರ್ಕ್ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ/ ಅನುದಾನಿತ/ ಅನುದಾನರಹಿತ ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿಗಳು ಶೇ 100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗಧಿ ಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.

 

ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ssp.postmatric.karnataka.gov.in ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಕಚೇರಿ ದೂ.ಸಂ.9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.