Bengaluru: ವಿದ್ಯುತ್ ಪ್ರಸರಣ ಇಲಾಖೆಯಿಂದ 35 ಸಾವಿರ ಹುದ್ದೆ ಶೀಘ್ರ ಭರ್ತಿ-ಸಿಎಂ ಘೋಷಣೆ

Bengaluru : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
Comments are closed.