Dakshina kannada: ದ.ಕ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅಧಿಕೃತ ನಿಯುಕ್ತಿ ಪತ್ರ

Share the Article

Dakshina kannada: ದಕ್ಷಿಣ ಕನ್ನಡ (Dakshina kannada) ಜಿಲ್ಲಾ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾಗಿ ಪುನರಾಯ್ಕೆಯಾದ ಸತೀಶ್ ಕುಂಪಲರವರು ವಿಜಯೇಂದ್ರ ಅವರಿಂದ ಅಧಿಕೃತವಾಗಿ ನಿಯುಕ್ತಿ ಪತ್ರ ಪಡೆದುಕೊಂಡರು.

ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್‌ ಕುಂಪಲ 2025ರ ಜನವರಿ ತಿಂಗಳಿನಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.

‘ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದ್ದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2021 ಜನವರಿಯಲ್ಲಿ ಸತೀಶ್ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿದ್ದರು.

Comments are closed.