Death: ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಯುವಕ ಸಾವು

Death: ಜೂನ್ 15ರಂದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇದ್ದಿದ್ದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ (Brain Dead) ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು.

ಆದ್ರೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆಂದು (Death) ವೈದ್ಯರು ತಿಳಿಸಿದ್ದು, ಅಕ್ಷಯ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Comments are closed.