D K Shivkumar : ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ತನ್ನ ಕಣ್ಣುಗಳನ್ನು ಗಿಫ್ಟ್ ಕೊಟ್ಟ ಡಿಕೆ ಶಿವಕುಮಾರ್ !!

D K Shivkumar : ನಿನ್ನೆ ತಾನೆ ಕಾಂಗ್ರೆಸ್ ಯುವ ನಾಯಕ, ಲೋಕಸಭಾ ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿಯವರು 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ರಾಹುಲ್ ಗಾಂಧಿಯವರ ಹುಟ್ಟುಹಬ್ಬಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಕಣ್ಣುಗಳನ್ನು ಗಿಫ್ಟ್ ನೀಡಿದ್ದಾರೆ.

ಹೌದು, ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನೇತ್ರದಾನ ಶಿಬಿರ ನಡೆಯಿತು. ಈ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಮಾಡಿದರು. ನೇತ್ರದಾನ ಪತ್ರಕ್ಕೆ ಡಿಕೆ ಶಿವಕುಮಾರ್ ಸಹಿ ಮಾಡಿದರು.
ಬಡಿಕ ಮಾಧ್ಯಮಗಳೊಂದಿಗೆ ಮಾತನಾಡಿದವರು “ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ” ಎಂದು ತಿಳಿಸಿದರು.
Comments are closed.