

Bangalore: ಬೆಂಗಳೂರಿನಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಡಿಸಿಎಫ್ ವರ್ಗಾವಣೆ ಮಾಡಿದೆ. ಬಿಬಿಎಂಪಿ ಡಿಸಿಎಫ್ ಬಿಎಲ್ ಜಿ ಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಚಿಕ್ಕಮಗಳೂರು ಡಿಸಿಎಫ್ ಜಿ.ಕೆ.ಸುದರ್ಶನ್ ಅವರನ್ನು ನೇಮಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಲಾಗಿದೆ.
ಜೂನ್ 15 ರಂದು ಅಕ್ಷಯ್ ತನ್ನ ಗಾಡಿಯಲ್ಲಿ ಬನಶಂಕರಿ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ತಲೆಮೇಲೆ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡು ಪ್ರಜ್ಞೆ ತಪ್ಪಿದ್ದು, ಆಸ್ಪತ್ರೆಗೆ ದಾಖಲು ಮಾಡಿದಾಗ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಕ್ಷಯ್ ಕುಟುಂಬದವರು ಈ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಕ್ಷಯ್‌ನ ಎರಡೂ ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ನೀಡಲು ಮುಂದಾಗಿದೆ.













