Dinesh Gundu Rao: ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ: ದಿನೇಶ್ ಗುಂಡೂರಾವ್

Dinesh Gundu Rao: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಆರೋಗ್ಯ ಭದ್ರತೆ, 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ರಾಜ್ಯದ ಯಾವುದೇ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ 3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸುವ ಸಲುವಾಗಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ- ಖಾಯಂ ಅಲ್ಲದ ಸಿಬ್ಬಂದಿಗೆ (KASS-NPE)’ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Comments are closed.