Resrvation : ಮುಸ್ಲಿಮರಿಗೆ ಮತ್ತೊಂದು ಬಂಪರ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಸರ್ಕಾರ!! ಗುತ್ತಿಗೆ ಬೆನ್ನಲ್ಲೇ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

Resrvation ರಾಜ್ಯ ಸರ್ಕಾರದಿಂದ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15 ಕ್ಕೆ ಹೆಚ್ಚಳ ಮಾಡಿದೆ.

ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಇದೀಗ ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ದೊಡ್ಡ ಹೆಜ್ಜೆ ಇಟ್ಟಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ ಶೇ 10 ರಷ್ಟು ಮೀಸಲಾತಿ ಇರುವುದನ್ನು 15% ಗೆ ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದ್ದಾರೆ.
ಅಂದಹಾಗೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿಯನ್ನು ಪ್ರಸ್ತುತ ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಸಿಎಂ ಸಿದ್ದರಾಮಯ್ಯನವರ ಮುಂದೆ ಇಟ್ಟಿದ್ದರು. ಇದೀಗ ಈ ಪ್ರಸ್ತಾವನೆಯನ್ನು ಇಂದಿನ ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲಾ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ. ರಾಜ್ಯದಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ.
Comments are closed.