Priyank Kharge: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ

Share the Article

Priyank Kharge: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್‌ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2 ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವ ರೀತಿಯಲ್ಲಿ 199-ಬಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಇದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆ ಸುಗಮ ಮಾಡಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕ ಆಸ್ತಿಗಳು ಅಧಿಕೃತ ಆಗುವುದಲ್ಲದೆ ಗ್ರಾಮ ಪಂಚಾಯಿತಿಗಳ ಆದಾಯ ಹೆಚ್ಚಲಿದ್ದು, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

Comments are closed.