Murudeshwara:ಮುರುಡೇಶ್ವರ ಪುಣ್ಯಕ್ಷೇತ್ರದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ!

Share the Article

Murudeshwara: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲಿ ಇಲ್ಲಿನ ಆಡಳಿತ ಮಂಡಳಿ ವಸ್ತ್ರ ಸಂಹಿತೆ ಜಾರಿಗೆ ತಂದಿದೆ.

 

ಮುರುಡೇಶ್ವರ (Murudeshwara) ದೇಶದ ಪ್ರಸಿದ್ಧ ಪ್ರವಾಸಿ ಕ್ಷೇತ್ರಗಳಲ್ಲಿ ಒಂದಾಗಿದ್ದು, ಪ್ರತಿವರ್ಷ ದೇಶ ವಿದೇಶಗಳ, ಲಕ್ಷಾಂತರ ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಭೇಟಿ ನೀಡುತ್ತಾರೆ. ಇಲ್ಲಿನ ಜಲ ಸಾಹಸ ಕ್ರೀಡೆ, ಸ್ಕೂಬಾ ಡೈವ್‌ಗಳು ಪ್ರಸಿದ್ಧವಾಗಿದ್ದು, ಬೃಹತ್ ಶಿವನ ಮೂರ್ತಿ ಮತ್ತು ಗೋಪುರ ವಿಶ್ವ ಪ್ರಸಿದ್ಧಿ ಪಡೆದಿದೆ.

 

ಈಗಾಗಲೇ ಪುರುಷರು ಚಡ್ಡಿ, ಬನಿಯನ್‌ನಲ್ಲಿ ಬಂದರೆ, ಮಹಿಳೆಯರು ಸಹ ಆಕ್ಷೇಪಾರ್ಹ ರೀತಿಯ ಉಡುಪು ಧರಿಸಿ ಬರುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಭಕ್ತರು ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿ ತರುವಂತೆ ಮನವಿ ಮಾಡಿದ್ದರು.

 

ಈಗ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಪುರುಷರಿಗೆ ಪಂಚೆ ಮತ್ತು ಮಹಿಳೆಯರು ಸೀರೆ ಅಥವಾ ಚೂಡಿದಾರ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶ ಕಲ್ಪಿಸಲಿದೆ. ದೇವಾಲಯದ ಎದುರುಭಾಗ ಸೂಚನ ಫಲಕ ಹಾಕಲಾಗಿದ್ದು, ಯಾವ ವಸ್ತ್ರ ಧರಿಸಬೇಕು ಎಂದು ಫಲಕದಲ್ಲಿ ಚಿತ್ರ ಸಹಿತ ನಮೂದಿಸಲಾಗಿದೆ.

 

 

 

 

ಇದನ್ನೂ ಓದಿ: Udupi: ಮೀಶೋ ಹೆಸರಿನಲ್ಲಿ ಮಹಿಳೆಗೆ ಆನ್ಲೈನ್ ವಂಚನೆ!

Comments are closed.