Iran: ಅಮೆರಿಕಾದ ಸೇನಾ ನೆಲೆಗಳ ಮೇಲೆ ಇರಾನ್ ಭೀಕರ ದಾಳಿ

Share the Article

Iran: ಇಸ್ರೇಲ್‌ ಜೊತೆಗಿನ ಯುದ್ಧದಲ್ಲಿ ಅಮೆರಿಕ ಭಾಗಿಯಾಗಿದ್ದು ಮಾತ್ರವಲ್ಲದೆ, ತನ್ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡಿದ್ದರಿಂದ ಸಿಟ್ಟಾಗಿರುವ ಇರಾನ್‌, ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಕತಾರ್‌ನಲ್ಲಿರುವ ಸೇನಾ ನೆಲೆಗಳ ಮೇಲೆ 6 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೌದು, ಮಹತ್ವದ ಬೆಳವಣಿಗೆಯೊಂದರಲ್ಲಿ ಸಿರಿಯಾದಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಮಾಡಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಾಡಿವೆ. ಇನ್ನು ಇರಾನ್ ದಾಳಿಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಅಂದಹಾಗೆ ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾಮಿನಿ , ಅಮೆರಿಕಾದ ಮೇಲೆ ದಾಳಿ ಮಾಡುವ ಮೂಲಕ ಇರಾನ್ ರಕ್ಷಣೆ ಮಾಡಿಕೊಳ್ಳುವ ಉದ್ದೇಶ ನಮ್ಮದು, ಅಮೆರಿಕಾದ ಮೇಲೆ ನಡೆಯುವ ದಾಳಿ ಮತ್ತು ಸಮಯವನ್ನು ನಾವು ನಿರ್ಧರಿಸುತ್ತೇವೆ ಎಂದು ಶಪಥ ಮಾಡಿದ್ದರು. ಆ ಮಾತಿನಂತೆ ಇದೀಗ ಅಮೆರಿಕ ವಾಯುನೆಲೆ ಮೇಲೆ ಇರಾನ್ ದಾಳಿ ಮಾಡಿದೆ.

ಇದನ್ನೂ ಓದಿ: Doddarange gowda: ಪದ್ಮಶ್ರೀ ಪುರಸ್ಕೃತ ಕವಿ, ಸಾಹಿತಿ ದೊಡ್ಡರಂಗೇಗೌಡರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು:

Comments are closed.