Ration Card: ರಾಜ್ಯದ ʼಪಡಿತರ ಚೀಟಿʼ ದಾರರಿಗೆ ಸಿಹಿಸುದ್ದಿ

Share the Article

Ration Card: ರಾಜ್ಯದ ಪಡಿತರ ಚೀಟಿದಾರರಿಗೆ ಸರಕಾರ ಗುಡ್‌ನ್ಯೂಸ್‌ ನೀಡಿದೆ. ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ಸರಕಾರ ಚಿಂತನೆ ನಡೆಸಿದೆ.

ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್‌ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಎಲ್ಲಾ ಸಾಧ್ಯತೆಯಿದೆ.

ಜುಲೈ 2 ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಆಹಾರದಲ್ಲಿ ಕಿಟ್‌ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ. ಪ್ರಸ್ತಾವನೆಗೆ ಸಚಿವ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ: Electric flight: ವಿಶ್ವದ ಮೊದಲ ಎಲೆಕ್ಟ್ರಿಕ್ ವಿಮಾನ ಹಾರಾಟ ಯಶಸ್ವಿ!

Comments are closed.