Baindoor: ದೇವಾಲಯಗಳ ಜಾಗ ಒತ್ತುವರಿ ತೆರವಿಗೆ ಮಹತ್ವದ ಕ್ರಮ

Baindoor: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಇವುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ದೇವಾಲಯದ ಅಭಿವೃದ್ಧಿ ಕಾರ್ಯಕಗಳ ಕುರಿತ ಸಭೆಯಲ್ಲಿ ಹೇಳಿದರು.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ ಅನೇಕ ದೇವಾಲಯಗಳ ಜಾಗ ಒತ್ತುವರಿಯಾಗಿದ್ದು, ಈಗಾಗಲೇ 15000 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಇನ್ನೂ 20,000 ಎಕರೆ ಜಾಗ ಒತ್ತುವರಿ ಬಾಕಿ ಇದ್ದು, ಹಂತ ಹಂತವಾಗಿ ತೆರವು ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: RUDSET: ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
Comments are closed.