Home News Rain: ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ

Rain: ಕರಾವಳಿ ಸೇರಿದಂತೆ ‌ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ

Hindu neighbor gifts plot of land

Hindu neighbour gifts land to Muslim journalist

Rain: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ

ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ, ಇನ್ನು ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬುಧವಾರ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.ಗಾಳಿಯ ವೇಗವು ಪ್ರತಿ ಗಂಟೆಗೆ 50 ರಿಂದ 60 ಕಿ.ಮೀ ಇರಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಿದೆ.ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನುಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ ತಿಂಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಜೂನ್ 27ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Death: 12 ವರ್ಷದ ಪ್ರೀತಿ ಫೇಲ್ಯೂ‌ರ್ ಗೆ ಸ್ಯಾಡ್ ರೀಲ್ಸ್! 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು!