Emergency: ಸಂವಿಧಾನದ ಚೈತನ್ಯ ಭಗ್ನಗೊಳಿಸಿದ್ದನ್ನು ಭಾರತೀಯರು ಮರೆಯಲು ಸಾಧ್ಯವಿಲ್ಲ – ತುರ್ತು ಪರಿಸ್ಥಿತಿಯ ಬಗ್ಗೆ ಪ್ರಧಾನಿ

Emergency: ತುರ್ತು ಪರಿಸ್ಥಿತಿಗೆ 50 ವರ್ಷಗಳು ತುಂಬಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇದನ್ನು “ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದು” ಎಂದು ಕರೆದರು. “ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಬಂಧನದಲ್ಲಿಟ್ಟಿತ್ತು. ನಮ್ಮ ಸಂವಿಧಾನದ ಚೈತನ್ಯವನ್ನು ಭಗ್ನಗೊಳಿಸಿದ ರೀತಿಯನ್ನು ಯಾವ ಭಾರತೀಯನೂ ಎಂದಿಗೂ ಮರೆಯುವುದಿಲ್ಲ” ಎಂದು ಅವರು ಹೇಳಿದರು.

“ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬುತ್ತಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ. ಈ ದಿನದಂದು, ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳನ್ನು ಬದಿಗಿಡಲಾಯಿತು, ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಲಾಯಿತು.
ಪತ್ರಿಕಾ ಸ್ವಾತಂತ್ರ್ಯವನ್ನು ಅಳಿಸಿಹಾಕಲಾಯಿತು ಮತ್ತು ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರನ್ನು ಜೈಲಿಗೆ ಹಾಕಲಾಯಿತು” ಎಂದು ಪ್ರಧಾನಿ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಬರೆದಿದ್ದಾರೆ. ಇಂದಿರಾ ಗಾಂಧಿ ಜೂನ್ 25, 1975ರಂದು ತುರ್ತು ಪರಿಸ್ಥಿತಿಯನ್ನು ಹೇರಿದ್ದರು.
ಇದನ್ನೂ ಓದಿ:Accident: ಕಾರವಾರದಲ್ಲಿ ಲಾರಿ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ
Comments are closed.