Mangaluru: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: 8 ಆರೋಪಿಗಳು ಎನ್‌ಐಎ ಕಸ್ಟಡಿಗೆ

Share the Article

Mangaluru: ಮೇ.1 ರಂದು ಬಜಪೆ ಸಮೀಪ ಕಿನ್ನಿಪದವು ಜಂಕ್ಷನ್‌ ಬಳಿ ನಡೆದ ಹಿಂದೂ ಕಾರ್ಯಕರ್ತ, ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ಬೆಂಗಳೂರಿನ 50ನೇ ಸಿಸಿಎಚ್‌  ನ್ಯಾಯಾಲಯವು ಎನ್‌ಐಎ ಕಸ್ಟಡಿಗೆ ನೀಡಿದೆ.

ಕೊಲೆ ಪ್ರಕರಣದ ಕುರಿತು ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್‌ ದಾಖಲು ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್‌ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜು.1 ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

Comments are closed.