Landslide: ಮಣ್ಣಗುಂಡಿ ಬಳಿ ಗುಡ್ಡ ಕುಸಿತ, ಸಾಲು ನಿಂತಿರುವ ವಾಹನಗಳು: ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ

Mangalore Bangalore Highway: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮರಗಳು ಉರುಳಿ ಬಿದ್ದಿದ್ದು, ಕಿಲೋ ಮೀಟರ್‌ಗಟ್ಟಲೆ ವಾಹನ ಸಾಲುಗಟ್ಟಿ ನಿಂತಿದೆ.

ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಗುಡ್ಡವನ್ನು ಕಡಿದದ್ದೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮಳೆ ನಿರಂತರವಾಗಿ ಸುರಿಯುತ್ತಿದ್ದರೂ ಮಣ್ಣು ಸಡಿಲಗೊಂಡರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ದಿವ್ಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಘಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ಭಾರೀ ವಾಹನಗಳ ಸಂಚಾರ ನಿಂತಿದೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಬಂದಿದ್ದು, ಯಂತ್ರದ ಸಹಾಯದಿಂದ ಮಣ್ಣು ತೆರವು ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ಮಾರೇನಹಳ್ಳಿ ಬಳಿ ಕೂಡಾ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ. ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಈ ಕುರಿತು ಆದೇಶ ನೀಡಿದ್ದಾರೆ.
ಪರ್ಯಾಯ ಮಾರ್ಗ:
ಬೆಂಗಳೂರಿನಿಂದ ಮಂಗಳೂರಿಗೆ: ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಮೂಲಕ ಸಂಚರಿಸುವುದು
ಮಂಗಳೂರಿನಿಂದ ಬೆಂಗಳೂರಿಗೆ: ಸಂಪಾಜೆ ಅಥವಾ ಚಾರ್ಮಾಡಿ ಘಾಟ್ ಮಾರ್ಗವನ್ನು ಬಳಸಿಕೊಂಡು ಸಂಚರಿಸುವುದು
ಇದನ್ನೂ ಓದಿ: CBSE: ಇನ್ನು ಮುಂದೆ ಸಿಬಿಎಸ್‌ಇ 10ನೇ ತರಗತಿಗೆ ಎರಡು ಬಾರಿ ಪರೀಕ್ಷೆ
Comments are closed.