D K Shivkumar : ಮನೆ ಕಟ್ಟುವವರಿಗೆ ಹೊಸ ರೂಲ್ಸ್ – ಡಿಕೆ ಶಿವಕುಮಾರ್ ಘೋಷಣೆ!!

Share the Article

D K Shivkumar : ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಡಿಸಿಎಂ DK ಶಿವಕುಮಾರ್ ಮತ್ತೊಮ್ಮೆ ಜನರನ್ನು ಎಚ್ಚರಿಸಿ ಹೊಸ ರೂಲ್ಸ್ ಬಗ್ಗೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 ಲಕ್ಷ ಜನ ಹಳ್ಳಿಗಳು ಹಾಗೂ ನಗರ ಪ್ರದೇಶಗಳಲ್ಲಿ ಕಟ್ಟಡ ನಕ್ಷೆ ಅನುಮತಿ ಪಡೆಯದೇ ಮನೆ ಕಟ್ಟಿಕೊಂಡು, ವಿದ್ಯುತ್ ಹಾಗೂ ನೀರಿನ ಸಂಪರ್ಕಕ್ಕೆ ಅರ್ಜಿ ಹಾಕಿದ್ದಾರೆ. ಈ ವಿಚಾರವಾಗಿ ಕಾನೂನು ಸಲಹೆಗಾರರ ಜತೆ ಈ ವಿಚಾರವಾಗಿ ಚರ್ಚಿಸಿ, ಸಾರ್ವಜನಿಕರಿಗೆ ಹೇಗೆ ನೆರವಾಗಬಹುದು ಎಂದು ಅಭಿಪ್ರಾಯ ಕೇಳಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ‘ಕಟ್ಟಡ ನಕ್ಷೆ ಅನುಮೋದನೆ ಪಡೆಯದೇ ಯಾರೂ ಮನೆ ಕಟ್ಟಬೇಡಿ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತೆ ಇಂತಹ ಸಾಹಸಕ್ಕೆ ಕೈ ಹಾಕಬೇಡಿ. ಈ ವಿಚಾರದಲ್ಲಿ ಅಕ್ರಮವಾಗಿ ಮನೆ ಕಟ್ಟಿದರೆ ಸಕ್ರಮ ಮಾಡುವುದು ಕಷ್ಟ. ನೀರು ಹಾಗೂ ವಿದ್ಯುತ್ ಸಂಪರ್ಕ ಸಿಗುವುದಿಲ್ಲ.” ಎಂದು ತಿಳಿಸಿದರು.

ಇದನ್ನೂ ಓದಿ: Viral Video : ಚಿರತೆ ಅಟ್ಯಾಕ್, ಬರಿಗೈಯಲ್ಲಿ ಏಕಾಂಗಿಯಾಗಿ ಹೋರಾಡಿದ ಇಟ್ಟಿಗೆ ಕಾರ್ಮಿಕ – ರೋಚಕ ವಿಡಿಯೋ ವೈರಲ್

Comments are closed.