Suraj Revanna: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ – ಸೂರಜ್ ರೇವಣ್ಣಗೆ ರಿಲೀಫ್ – ಬಿ ರಿಪೋರ್ಟ್ ಸಲ್ಲಿಸಿದ ಸಿಐಡಿ

Suraj Revanna: ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯಿಂದ ಪ್ರಕರಣ ಮುಚ್ಚಲು ಸಿಐಡಿ ತನಿಖಾ ತಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ದಾಖಲಾಗಿದ್ದ 2 ಪ್ರಕರಣಗಳ ಪೈಕಿ ಒಂದರಲ್ಲಿ ಬಿ ರಿಪೋರ್ಟ್ ಸಲ್ಲಿದೆ. ಈಗಾಗಲೇ ಒಂದು ಪ್ರಕರಣದಲ್ಲಿ ಸಿಐಡಿ ಚಾರ್ಜ್ಶೀಟ್ ಸಲ್ಲಿಸಿದೆ.

27 ವರ್ಷದ ಜೆಡಿಎಸ್ ಕಾರ್ಯಕರ್ತರೊಬ್ಬರು ಫಾರ್ಮ್‌ಹೌಸ್‌ನಲ್ಲಿ ಸೂರಜ್ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ 2024ರ ಜೂನ್‌ನಲ್ಲಿ ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿತ್ತು.
ಮೊದಲು ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ನಿರ್ಧರಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ರೆಸ್ಟ್ ಮಾಡಲಾಗಿತ್ತು. ದೂರುದಾರರ ಹೇಳಿಕೆಯಲ್ಲಿ ವೈರುಧ್ಯಗಳಿವೆ ಎಂದು ಸಿಐಡಿ ಹೇಳಿದೆ.
ಇದನ್ನೂ ಓದಿ;Belthangady: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ನ್ಯಾಷನಲ್ ಅಧ್ಯಕ್ಷ ಭೇಟಿ!
Comments are closed.