BJP: ಕರ್ನಾಟಕದ ಈ ಪವರ್ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ?

Share the Article

BJP: ಕರ್ನಾಟಕದ ಈ ಹಿರಿಯ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಸುದ್ದಿ ಎಂದು ಭಾರಿ ಸದ್ದು ಮಾಡುತ್ತಿದೆ.

ಹೌದು, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಲೇ ಇದೆ. ಜುಲೈ ಮೊದಲ ವಾರದಲ್ಲಿ ಅಧ್ಯಕ್ಷರ ಹೆಸರು ರಿವಿಲ್‌ ಆಗುವ ಸಾಧ್ಯತೆ ಇದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕೆ ಕರ್ನಾಟಕದ ಒಬ್ಬ ಹಿರಿಯ ರಾಜಕಾರಣಿಯ ಹೆಸರು ಕೇಳಿ ಬಂದಿದೆಯಂತೆ!!

ಯಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಚರ್ಚೆಯಲ್ಲಿದ್ದು, ಈ ಹೆಸರುಗಳ ಫೈಕಿ ಕನ್ನಡಿಗನ ಹೆಸರು ಕೇಳಿ ಬರುತ್ತಿದೆ. ಕರ್ನಾಟಕದ ನಾಯಕನಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಬಿಜೆಪಿ ನಾಯಕ ಕೇಂದ್ರ ಸಚಿವ ಆಗಿರುವ ಪ್ರಹ್ಲಾದ್ ಜೋಶಿ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟಲು ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ. ಅಂದ ಹಾಗೆ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರ ಮೂರು ಅವಧಿಯಲ್ಲಿಯೂ ಕೂಡ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಮೋದಿಗೆ ತುಂಬಾ ಆಪ್ತರಾಗಿದ್ದರು. ಮೋದಿ ಅವರ ಆಪ್ತ ವಲಯಗಳಲ್ಲಿ ಇವರು ಕೂಡ ಪ್ರಮುಖರು. ರಾಜ್ಯದ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಕ್ಕಿಂತಲೂ ಕೇಂದ್ರದಲ್ಲಿ ಇವರ ಅಗತ್ಯತೆ ಹಾಗೂ ಪ್ರಭಾವ ಹೆಚ್ಚಿದೆ. ಹೀಗಾಗಿ ಜೋಶಿ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪಟ್ಟ ಕಟ್ಟಲು ಬಿಜೆಪಿ ನಾಯಕರು ಮನಸು ಮಾಡಿದ್ದರು ಮಾಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ:BJP: ಮಾಜಿ ಪ್ರಧಾನಿ ʼಇಂದಿರಾ ಗಾಂಧಿʼ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲು

Comments are closed.