Bagalakote: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವಿಗೀಡಾದ ಶಿಕ್ಷಕ

Bagalkote: ಬಾಗಲಕೋಟೆಯಲ್ಲಿ ಶಿಕ್ಷಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತ ಹೊಂದಿದ್ದಾರೆ. ಕ್ಲಾಸ್‌ನಲ್ಲಿ ಪಾಠ ಮಾಡುತ್ತಿರುವ ಸಂದರ್ಭದಲ್ಲೇ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತುಂಗಳ ಹೈಸ್ಕೂಲಿನಲ್ಲಿ ಈ ಘಟನೆ ನಡೆದಿದೆ.

ಕನ್ನಡ ಶಿಕ್ಷಕ ಗುರುಪಾದ ಹಿಪ್ಪರಗಿ (49) ಮೃತ ಶಿಕ್ಷಕ. ರಬಕವಿ ಬನಹಟ್ಟಿ ಮೂಲದ ಗುರುಪಾದ ಹಿಪ್ಪರಗಿ, ತರಗತಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾಗ ಹೃದಯಾಘಾತ ಉಂಟಾಗಿ ಸಾವಿಗೀಡಾಗಿದ್ದಾರೆ.
Comments are closed.