Mangaluru : ತಮ್ಮನ ಅಂತ್ಯಕ್ರಿಯೆಗೆ ಬಂದಿದ್ದ ಅಕ್ಕ ಅಪಘಾತದಲ್ಲಿ ಸಾವು !!

Mangaluru : ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನು ಸಹ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೌದು ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬಂಗ್ರಕೂಳೂರು ನಿವಾಸಿ ಶ್ರುತಿ(27) ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು-ಆಯಕ್ಟಿವಾ ಅಪಘಾತದಿಂದ ಗಂಭೀರ ಗಾಯಗೊಂಡಿದ್ದರು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗಾಯಾಳು ಶ್ರುತಿ ಅವರ ತಂದೆ ಗೋಪಾಲಾಚಾರ್ಯ(57) ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ. ಕಾರು ಚಾಲಕ ಹೊನ್ನಾವರ ನಿವಾಸಿ ಪ್ರಶಾಂತ್ ವಿರುದ್ಧ ನಿರ್ಲಕ್ಷ್ಯ, ಅತಿ ವೇಗದ ಚಾಲನೆ ಬಗ್ಗೆ ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹೋದರ ಮೃತಪಟ್ಟಿದ್ದಕ್ಕೆ ಚೆನ್ನೈನಿಂದ ಬಂದಿದ್ದ ಶ್ರುತಿ, ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಭಾವಂತೆ. ಕೂಳೂರು, ಮಂಗಳೂರಿನಲ್ಲಿ ತನ್ನ ಶಿಕ್ಷಣ ಪೂರ್ಣಗೊಳಿಸಿದ್ದರು. ಕಂಪ್ಯೂಟರ್ ಎಂಜಿನಿಯರಿಂಗ್ ಕಲಿತಿದ್ದು ಚೆನ್ನೈನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. ಜೂ.10ರಂದು ತನ್ನ ಸಹೋದರ, ಕ್ಯಾನಿಕ್ ಆಗಿದ್ದ ಸುಜಿತ್ (24) ಮೃತಪಟ್ಟ ಹಿನ್ನೆಲೆಯಲ್ಲಿ ರಜೆಯಲ್ಲಿ ಬಂದಿದ್ದರು.
Comments are closed.