Shivamogga: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

Shivamogga: ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಜೂ.28 (ಶನಿವಾರ) ನಡೆದಿದೆ.

ನವೀನ್ ಎಂಬುವವರು ಸಾಕಿದ್ದ ಗೋವನ್ನು ಮೇಯಲೆಂದು ಬಿಟ್ಟಿದ್ದು, ಶನಿವಾರ ಸಂಜೆ 4.30 ರ ಸುಮಾರಿಗೆ ಊರಿನ ಜನರು ಫೋನ್ ಮಾಡಿ ನಿಮ್ಮ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವುದಾಗಿ ಹೇಳಿದ್ದಾರೆ. ಕೂಡಲೇ ಬಂದು ನೋಡಿದಾಗ 9 ವರ್ಷ ಪ್ರಾಯದ ಕರು ಹಾಕಿದ ಮಲೆನಾಡು ಗಿಡ್ಡ ತಳಿಯ ಹಸುವಿನ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡು ಬಂದಿದೆ. ಯಾರೋ ದನದ ಕೆಚ್ಚಲು ಕೊಯ್ದಿರುವುದು ಕಂಡು ಬಂದಿದೆ.
ನಂತರ ದನವನ್ನು ಗ್ರಾಮಸ್ಥರ ಸಹಾಯದಿಂದ ಮನೆಗೆ ಕರೆತರಲಾಗಿದ್ದು, ಪಶು ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಸಂತ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಾಗಿದೆ.
Comments are closed.