Mangaluru: ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ!

Mangaluru: ನಗರದ ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ సింగా ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದ ಸಂದರ್ಭದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಟೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿದೆ.

ಮಹಜರು ನಡೆಸಿ ನಿಷೇಧಿತ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Comments are closed.