Bengaluru : ಮುಸ್ಲಿಂ ವ್ಯಕ್ತಿ ಪ್ರೀತಿಸಿ ಮದುವೆಯಾಗಿದ್ದ ಮಹಿಳೆ- ಬಿಬಿಎಂಪಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

Bengaluru : ಸಿಲಿಕಾನ್ ಸಿಟಿ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬಿಬಿಎಂಪಿ ಕಸದ ಲಾರಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಒಂದು ಪತ್ತೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಳೆದ ಎರಡ್ಮೂರು ವರ್ಷಗಳ ಹಿಂದೆ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಹೋಗಿದ್ದ ಹಿಂದೂ ಮಹಿಳೆ ಪುಷ್ಪಾ ಈ ಕೊಲೆಯಾದ ಮಹಿಳೆ ಎಂಬುದು ಬಯಲಾಗಿದೆ.

ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪ ಅಲಿಯಾಸ್ ಆಶಾ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆ ಹಿಂದೂ ಧರ್ಮದವಳಾಗಿದ್ದು, ಕೆಲ ವರ್ಷಗಳ ಹಿಂದೆ ಮುಸ್ಲಿಂ ವ್ಯಕ್ತಿಯೊಂದಿಗಿನ ಪ್ರೀತಿಗೆ ಮಣಿದು ಮದುವೆಯಾಗಿದ್ದರು. ಮದುವೆಯ ನಂತರ ಇಬ್ಬರೂ ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿ ವಾಸವಿದ್ದು, ದಾಂಪತ್ಯ ಜೀವನ ನಡೆಸುತ್ತಿದ್ದರು. ಆದರೆ, ಇವರ ನಡುವೆ ಗಲಾಟೆ ಕೂಡ ನಡೆಯುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಇದೀಗ ಗಂಡನೇ ಕೊಲೆ ಮಾಡಿ ಕಸದ ಲಾರಿಗೆ ಬೀಸಾಕಿ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಶವವನ್ನು ದ್ವಿಚಕ್ರ ವಾಹನದಲ್ಲಿ ತಂದು ಬಿಸಾಡಲಾಗಿದೆಯೆಂದು ಶಂಕೆ ವ್ಯಕ್ತವಾಗಿದೆ. ಶವವು ನಿರ್ವಸ್ತ್ರ ಸ್ಥಿತಿಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಅತ್ಯಾಚಾ*ರ ನಡೆದಿರಬಹುದೆಂಬ ಶಂಕೆಯೂ ಇದ್ದು, ತನಿಖೆ ಈಗ ಈ ಕೌಟುಂಬಿಕ ಕಲಹದಿಂದ ಹೀಗಾಗಿರಬಹುದು ಎಂದು ಅಂದಾಜಿಸಲಾಗಿದೆ. ಆಕೆಯ ಗಂಡನೇ ಈ ಭೀಕರ ಕೃತ್ಯ ಮಾಡಿರಬಹುದು ಎಂಬ ಅನುಮಾನ ಪೊಲೀಸ್ ಅಧಿಕಾರಿಗಳಿಗೆ ಬಂದಿದೆ. ಹುಳಿಮಾವು ಪ್ರದೇಶದಲ್ಲಿ ಮಹಿಳೆಯನ್ನು ಕೊಲೆ ಮಾಡಿ ಬಳಿಕ ಶವವನ್ನು ಇತರೆ ಪ್ರದೇಶಕ್ಕೆ ತಂದು ಬಿಸಾಡಿರುವ ಸಾಧ್ಯತೆಯೂ ಇರಬಹುದು ಎಂದು ತಿಳಿದುಬಂದಿದೆ.
ಅಂದಹಾಗೆ ಶನಿವಾರ ರಾತ್ರಿ ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದರು. ಈ ವೇಳೆ ಯುವತಿಯ ತಲೆ ಕೂದಲು ಕಾಣಿಸಿದೆ. ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಶವದ ವಿಚಾರ ಬೆಳಕಿಗೆ ಬಂದಿದೆ. ಸದ್ಯ ರಸ್ತೆಯ ಇಕ್ಕೆಲಗಳ ಸಿಸಿಟಿವಿ ಪರಿಶೀಲನೆ ಮಾಡಿದ್ದು, ಒಬ್ಬನೇ ದುಷ್ಕರ್ಮಿ ಆಟೋದಲ್ಲಿ ಬಾಡಿ ತಂದು ಬಿಸಾಡಿರುವುದು ತಿಳಿದುಬಂದಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Comments are closed.